Home ರಾಜ್ಯ ಇತರೆ ಹೆಚ್​ಡಿಕೆ ರಾಜೀನಾಮೆ ಕೊಟ್ಟು ಖರ್ಗೆ ಅವರನ್ನು ಸಿಎಂ ಮಾಡ್ಲಿ: ಯಡಿಯೂರಪ್ಪ

ಹೆಚ್​ಡಿಕೆ ರಾಜೀನಾಮೆ ಕೊಟ್ಟು ಖರ್ಗೆ ಅವರನ್ನು ಸಿಎಂ ಮಾಡ್ಲಿ: ಯಡಿಯೂರಪ್ಪ

ಕಲಬುರ್ಗಿ: ಸಿಎಂ ಹೆಚ್​. ಡಿ. ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಮಾಡ್ಲಿ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಯಲ್ಲಿ ಮಾತನಾಡಿದ ಅವರು, “ಮಲ್ಲಿಕಾರ್ಜುನ್ ಖರ್ಗೆ ಯಾವಾಗಲೋ ಸಿಎಂ ಆಗ್ಬೇಕಿತ್ತು ಅಂತ ಚಿಂಚೋಳಿಯಲ್ಲಿ ಪ್ರಚಾರದ ವೇಳೆ ಕುಮಾರಸ್ವಾಮಿ ಹೇಳಿದ್ದಾರೆ. ನಾಳೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೆಚ್​ಡಿಕೆ ಕನಸು ನನಸು ಮಾಡಲಿ” ಅಂತ ಹೇಳಿದ್ರು.

ಖರ್ಗೆ ಸಿಎಂ ಆಗ್ಬೇಕಿತ್ತು ಎನ್ನುವ ಮೂಲಕ ಕುಮಾರಸ್ವಾಮಿ ‘ಸಿದ್ದರಾಮಯ್ಯ ಮತ್ತೆ ಸಿಎಂ’ ಕೂಗಿಗೆ ಬಲವಾದ ಪೆಟ್ಟು ಕೊಟ್ಟಿದ್ದಾರಾ ಅನ್ನೋ ಮಾತುಗಳು ಕೇಳಿ ಬರ್ತಿದೆ. ಕುಮಾರಸ್ವಾಮಿ ಉರುಳಿಸಿದ ದಾಳ ಸಿದ್ದರಾಮಯ್ಯ ನಿದ್ದೆಗೆಡಿಸುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

ಚಿಂಚೋಳಿ ದತ್ತು ಪಡೆಯುತ್ತೇನೆ ಎನ್ನುವ ಸಿಎಂ ಹೇಳಿಕೆಗೆ ಬಿಎಸ್‌ವೈ ತಿರುಗೇಟು ನೀಡಿದ್ದು, “ಇದುವರೆಗೂ ಚಿಂಚೋಳಿಯ ಕಡೆಗೆ ತಿರುಗಿಯೂ ನೋಡದ ಸಿಎಂ ಕುಮಾರಸ್ವಾಮಿ ಚುನಾವಣೆ ಇದೆ ಅಂತ ಏನೇನೋ ಭರವಸೆಕೊಟ್ಟು ಹೋಗ್ತಾರೆ. ಚಿಂಚೋಳಿ ದತ್ತು ಪಡೆಯುವುದಾದರೆ ಇಷ್ಟು ದಿನ ಸಿಎಂ ಏನು ಮಾಡುತ್ತಿದ್ದರು” ? ಅಂತ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments