Friday, October 7, 2022
Powertv Logo
Homeದೇಶಯೆಸ್ ಬ್ಯಾಂಕ್ ಬಿಕ್ಕಟ್ಟು : ಅನಿಲ್ ಅಂಬಾನಿಗೆ ಸಮನ್ಸ್ ಜಾರಿ

ಯೆಸ್ ಬ್ಯಾಂಕ್ ಬಿಕ್ಕಟ್ಟು : ಅನಿಲ್ ಅಂಬಾನಿಗೆ ಸಮನ್ಸ್ ಜಾರಿ

ಹೊಸದಿಲ್ಲಿ: ಯೆಸ್ ಬ್ಯಾಂಕ್ ಬಿಕ್ಕಟ್ಟು ಪ್ರಕರಣದ ವಿಚಾರವಾಗಿ ರಿಲಯನ್ಸ್ ಗ್ರೂಪ್ ಮುಖ್ಯಸ್ಥ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಯೆಸ್ ಬ್ಯಾಂಕ್​ನಿಂದ ಅನಿಲ್ ಅಂಬಾನಿಯವರ ಸಂಸ್ಥೆ ಬಾರಿ ಪ್ರಮಾಣದಲ್ಲಿ ಸಾಲ ಪಡೆದಿತ್ತು. ಆದರೆ ಅದನ್ನು ಮರುಪಾವತಿ ಮಾಡಿರಲಿಲ್ಲ. ಹಾಗಾಗಿ ಇಂತಹ ಮರುಪಾವತಿ ಮಾಡದ ಸಾಲಗಳು ಹೆಚ್ಚಾಗಿರುವುದರಿಂದ ಯೆಸ್ ಬ್ಯಾಂಕ್ ಬಿಕ್ಕಟ್ಟು ಎದುರಿಸುತ್ತಿದೆ. ಇಡಿಯ ಮುಂಬೈ ಕಚೇರಿಯಲ್ಲಿ ಸೋಮವಾರ ಅನಿಲ್ ಅಂಬಾನಿಯವರನ್ನು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಗ್ರೂಪ್​ನ ಇತರ ಅಧಿಕಾರಿಗಳನ್ನು ಈ ವಾರದ ಅಂತ್ಯದಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. 

 

LEAVE A REPLY

Please enter your comment!
Please enter your name here

- Advertisment -

Most Popular

Recent Comments